ದೇಶ-ವಿದೇಶ

ಕೋವಿಡ್ -19: ವಿಶ್ವದಲ್ಲಿ 92 ಲಕ್ಷಕ್ಕೂ ಅಧಿಕ ಮಂದಿಗೆ ಸೋಂಕು

ಜಿನೆವಾ: ಕೊರೊನಾ ವೈರಸ್ ಹರಡುವುದನ್ನು ತಡೆಯಲು ಜಾರಿಗೆ ತಂದ ನಿರ್ಬಂಧಗಳಿಂದ ಆರ್ಥಿಕ ಚಟುವಟಿಕೆಗಳು ನಡೆಯದೆ ಜಗತ್ತಿನಾದ್ಯಂತ ವಿವಿಧ ರಾಷ್ಟ್ರಗಳು ಸಂಕಷ್ಟಕ್ಕೊಳಗಾಗಿವೆ. ಆದರೆ ಇನ್ನೊಂದೆಡೆ ಕೊರೊನಾ ವೈರಸ್ ಹರಡುವಿಕೆ ವ್ಯಾಪಕವಾಗಿ ಮುಂದುವರಿದಿದೆ. ಮಂಗಳವಾರ ಮಧ್ಯಾಹ್ನದ ವೇಳೆ ವಿಶ್ವದ ಒಟ್ಟು ಕೋವಿಡ್ -19 ಸೋಂಕಿತರ ಸಂಖ್ಯೆ 92 ಲಕ್ಷಕ್ಕೂ ಅಧಿಕವಾಗಿದೆ.

ವಿಶ್ವದ ಹೆಚ್ಚಿನ ರಾಷ್ಟ್ರಗಳಲ್ಲಿ ಮೊದಲ ಹಂತದ ಕೋವಿಡ್-19 ವೈರಸ್ ಹರಡುವಿಕೆ ಮುಂದುವರಿದಿದ್ದರೆ, ಚೀನಾ, ಯುರೋಪ್ ರಾಷ್ಟ್ರಗಳಲ್ಲಿ 2ನೇ ಹಂತದ ಹೊಸ ಕೋವಿಡ್ -19 ಪ್ರಕರಣಗಳು ಪತ್ತೆಯಾಗುತ್ತಿರುವುದು ನಿಯಂತ್ರಣಕ್ಕೆ ಸವಾಲಾಗಿ ಪರಿಣಮಿಸಿದೆ ಎಂದು ಡಬ್ಲ್ಯುಎಚ್‍ಒ ಕಳವಳ ವ್ಯಕ್ತಪಡಿಸಿದೆ.

ಕೊರೊನಾ ಸೋಂಕು ಹಡುವಿಕೆ ಪ್ರತಿ ದಿನ ಏರುಮುಖವಾಗಿ ಸಾಗುತ್ತಿದ್ದು, ರವಿವಾರ ಜಾಗತಿಕ ಕೋವಿಡ್ -19 ವೈರಸ್ ಪ್ರಕರಣಗಳಲ್ಲಿ ದಾಖಲೆಯ ಏರಿಕೆ ಕಂಡಿದ್ದು, 1,83,020ರಷ್ಟು ಸೋಂಕು ಪ್ರಕರಣಗಳು ದೃಢಪಟ್ಟಿವೆ. ದಿನವೊಂದರಲ್ಲಿ ವಿಶ್ವಾದ್ಯಂತ ಪತ್ತೆಯಾದ ಹೊಸ ಪ್ರಕರಣಗಳ ಹಿಂದಿನ ದಾಖಲೆ ಜೂ. 19ರಂದು 1,81,232 ಆಗಿತ್ತು ಎಂದು ಡಬ್ಲ್ಯುಎಚ್‍ಒ ತಿಳಿಸಿದೆ. ಭಾರತದಲ್ಲಿ ರವಿವಾರ 24 ಗಂಟೆಗಳಲ್ಲಿ ಗರಿಷ್ಠ 15,400 ಹೊಸ ಪ್ರಕರಣಗಳು ದಾಖಲಾಗಿವೆ. ಸೋಮವಾರದ 24 ಗಂಟೆಗಳಲ್ಲಿ 14,933 ಪ್ರಕರಣಗಳು ವರದಿಯಾಗಿವೆ.

ಮಂಗಳವಾರ ಮಧ್ಯಾಹ್ನದ ವೇಳೆಗೆ ಜಗತ್ತಿನ 213ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 92,09,934ಕ್ಕೆ ಏರಿಕೆಯಾಗಿದೆ. ಹಾಗೇ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4,74,797ಕ್ಕೆ ವೃದ್ಧಿಸಿದೆ.

ಈ ತನಕ ವಿಶ್ವದಲ್ಲಿ 49,56,983 ಮಂದಿ ವೈರಸ್ ಸೋಂಕಿನಿಂದ ಗುಣಮುಖರಾಗಿದ್ದು, 37,78,154 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ 57,903 ಮಂದಿಯ ಸ್ಥಿತಿ ತೀವ್ರ ಗಂಭೀರವಾಗಿದೆ ಎಂದು ಡಬ್ಲ್ಯುಎಚ್‍ಒ ತಿಳಿಸಿದೆ.

ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಅಮೇರಿಕದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಬಹಳ ಹೆಚ್ಚಾಗಿದೆ. ಮಂಗಳವಾರ ಮಧ್ಯಾಹ್ನದ ವೇಳೆಗೆ ಆ ರಾಷ್ಟ್ರದಲ್ಲಿ 23,88,225ಕ್ಕೂ ಅಧಿಕ ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ. ಅವರಲ್ಲಿ 1,22,611 ಮಂದಿ ವೈರಸ್‍ಗೆ ಬಲಿಯಾಗಿದ್ದು, 10,03,062 ಮಂದಿ ಗುಣಮುಖರಾಗಿದ್ದಾರೆ. 12,62,552 ಮಂದಿ ರಾಷ್ಟ್ರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 16,510 ಮಂದಿ ಸೋಂಕಿತರ ಸ್ಥಿತಿ ಗಂಭೀರವಾಗಿದೆ.

ಸೋಂಕಿತರ ಪಟ್ಟಿಯಲ್ಲಿ ಅಮೇರಿಕ ಮೊದಲ ಸ್ಥಾನದಲ್ಲಿದ್ದರೆ, ಬ್ರೆಜಿಲ್, ರಷ್ಯಾ ಕ್ರಮವಾಗಿ ಎರಡು, ಮೂರನೇ ಸ್ಥಾನಗಳನ್ನು ಹೊಂದಿವೆ. ಬ್ರೆಜಿಲ್‍ನಲ್ಲಿ ಈ ವರೆಗೆ 11,11,348 ಮಂದಿ ಸೋಂಕಿತರಾಗಿದ್ದು, 51,407 ಮಂದಿ ಮೃತಪಟ್ಟಿದ್ದಾರೆ. 5,94,104 ಮಂದಿ ಗುಣಮುಖರಾಗಿದ್ದು, 4,65,837 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ 8,318 ಮಂದಿಯ ಸ್ಥಿತಿ ತೀವ್ರ ಚಿಂತಾಜನಕವಾಗಿದೆ.

ಈ ತನಕ ರಷ್ಯಾದಲ್ಲಿ 599,705 ಸೋಂಕಿತರು ಪತ್ತೆಯಾಗಿದ್ದು, 8,359 ಮಂದಿ ಸಾವನ್ನಪ್ಪಿದ್ದಾರೆ. 3,56,429 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದು, 2,34,917 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 2,300 ಮಂದಿ ಸೋಂಕಿನಿಂದ ತೀವ್ರವಾಗಿ ಬಳಲುತ್ತಿದ್ದಾರೆ.

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ಉತ್ತರ ಪ್ರದೇಶದಲ್ಲಿ ಆಕ್ಸಿಜನ್​ ಸ್ಫೋಟ; ಇಬ್ಬರು ಸಾವು, ಆರು ಮಂದಿ ಸ್ಥಿತಿ ಗಂಭೀರ

Sushmitha Jain

ಕೊರೊನಾ ವಿರುದ್ಧ ಸಮರ: ರಾಷ್ಟ್ರವನ್ನುದ್ದೇಶಿಸಿ ಇಂದು ರಾತ್ರಿ ಪ್ರಧಾನಿ ಮೋದಿ ಭಾಷಣ

Upayuktha

ಐತಿಹಾಸಿಕ ಅಯೋಧ್ಯೆ ರಾಮ ಮಂದಿರ ಶಿಲಾನ್ಯಾಸ- ಲೈವ್

Upayuktha