ನಿಧನ ಸುದ್ದಿ

ಯುವ ಪತ್ರಕರ್ತ ಪವನ್ ಹೆತ್ತೂರು ಇನ್ನಿಲ್ಲ

ಮೈಸೂರು: ಪ್ರಜಾವಾಣಿ, ವಿಜಯವಾಣಿ, ಕಸ್ತೂರಿ ಟಿವಿಯಲ್ಲಿ ಕೆಲಸ ಮಾಡಿದ್ದ ಉತ್ಸಾಹಿ ಪತ್ರಕರ್ತ ಪವನ್ ಹೆತ್ತೂರು (35) ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.

ಮೈಸೂರು ಪ್ರಜಾವಾಣಿ ಬ್ಯೂರೋದಲ್ಲಿ ಕೆಲಸ ಮಾಡುತ್ತಿದ್ದ ಪವನ್, ಪತ್ನಿ, ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ.

ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪವನ್ ಗೆ ಆರೋಗ್ಯ ಗಂಭೀರವಾಗಿ, ಚಿಕಿತ್ಸೆಗೆ ಸ್ಪಂಧಿಸಲಿಲ್ಲ. ರಾತ್ರಿ 1.30 ಸುಮಾರಿಗೆ ಕೊನೆಯುಸಿರೆಳೆದರು. ಪವನ್ ಬದುಕಿ ಬರಲೆಂದು ಪ್ರಾರ್ಥಿಸಿದ್ದು ಪ್ರಯೋಜನವಾಗಲಿಲ್ಲ.

ಮೃತರ ಅಂತ್ಯಕ್ರಿಯೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆತ್ತೂರಿನಲ್ಲಿ ನಡೆಯಲಿದೆ.

ಸಂತಾಪ:
ಪತ್ರಕರ್ತ ಪವನ್ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ) ತೀವ್ರ ಸಂತಾಪ ವ್ಯಕ್ತಪಡಿಸಿದೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಕನ್ನಡದ ಯುವ ಚಿತ್ರನಟ ಚಿರಂಜೀವಿ ಸರ್ಜಾ ನಿಧನ

Upayuktha

ಗಣಿತ ಪ್ರಾಧ್ಯಾಪಕ, ಯಕ್ಷ ಕಲಾವಿದ ಪ್ರೊ. ಕೆರೆಮನೆ ರಾಮ ಹೆಗಡೆ ನಿಧನ

Upayuktha

ಕೊರೊನಾ ಸೊಂಕಿಗೆ ಬಲಿ

Harshitha Harish

Leave a Comment